checking data baseConnected successfully! Sample Image
  •  

ಮಹದೇವಯ್ಯನ 'ಶೂನ್ಯಸಂಪಾದನೆ' ವಚನಗಳು

search:
ವಚನ ಸಂಖ್ಯೆ 62      C59
ತ್ರಿವಿಧದ ನಿತ್ಯವ, ತ್ರಿವಿಧದ ಅನಿತ್ಯವ ಬಲ್ಲವರಾರೊ?
ತ್ರಿವಿಧಕ್ಕೆ ತ್ರಿವಿಧವನಿತ್ತು ತ್ರಿವಿಧ ಪ್ರಸಾದವ ಕೊಳ್ಳಬಲ್ಲಡೆ;
ಆತನು ತ್ರಿವಿಧನಾಥನೆಂಬೆನು, ಆತನು ವೀರನೆಂಬೆನು.
ಆತನು ಧೀರನೆಂಬೆನು,
ಆತನು ಗುಹೇಶ್ವರಲಿಂಗದಲ್ಲಿ ಅಚ್ಚಪ್ರಸಾದಿಯೆಂಬೆನು.
138.02 370 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 63      C60
ಅರ್ಪಿತ ಅನರ್ಪಿತವನಾರುಬಲ್ಲರಯ್ಯಾ?
ಅರ್ಪಿಸಿ ಕೊಂಬುದು ಅನರ್ಪಿತ
ಅರ್ಪಿಸದೆ ಕೊಂಬುದೂ ಮುನ್ನವೆ ಅನರ್ಪಿತ.
ಅರ್ಪಿಸಿ ಅರ್ಪಿಸದೆ ಕೊಳಬಲ್ಲ
ಗುಹೇಶ್ವರಾ ನಿಮ್ಮ ಶರಣ.
846.02 371 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 64      C61
ತನುವ ತಾಗದ ಮುನ್ನ, ಮನವ ತಾಗದ ಮುನ್ನ,
ಅಪ್ಯಾಯನ ಬಂದು ಎಡೆಗೊಳ್ಳದ ಮುನ್ನ_ಅರ್ಪಿತವ ಮಾಡಬೇಕು.
ಗುರುವಿನ ಕೈಯಲ್ಲಿ ಎಳತಟವಾಗದ ಮುನ್ನ_ಅರ್ಪಿತವ ಮಾಡಬೇಕು.
ಎಡದ ಕೈಯಲ್ಲಿ ಕಿಚ್ಚು, ಬಲದ ಕೈಯಲ್ಲಿ ಹುಲ್ಲು,
ಉರಿ ಹತ್ತಿತ್ತು ಗುಹೇಶ್ವರಾ ನಿಮ್ಮ ಪ್ರಸಾದಿಯ !
165.02 372 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 65      C62
ಉದಕ ಮೂರುತಿಯಾಗಿ ಉದಯವಾಯಿತ್ತು ಪಿಂಡಿಗೆಯಲ್ಲಿ.
ಅಲ್ಲಿಯೆ ಮೂಲಸ್ಥಾನ ಸ್ಥಾಪ್ಯವಾಯಿತ್ತು ಸ್ವದೇಹ ಶಿವಪುರದಲ್ಲಿ.
ವಾಯು ಪೂಜಾರಿಯಾಗಿ, ಪರಿಮಳದಿಂಡೆಯ ಕಟ್ಟಿ,
ಪೂಜಿಸುತಿರ್ದುದು_ಓ ನವದ್ವಾರಶಿವಾಲಯದ ಆದಿ ಮಧ್ಯಸ್ಥಾನದಲ್ಲಿ!
ಗುಹೇಶ್ವರನೆಂಬುದಲ್ಲಿಯೇ ನಿಂದಿತ್ತು.
193.02 373 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 66      C63
ಕಂಗಳ ಬೆಳಗ ಕಲ್ಪಿಸಬಾರದು, ಕರ್ಣದ ನಾದವ ವರ್ಣಿಸಬಾರದು.
ಜಿಹ್ವೆಯ ರುಚಿಗೆ ಪ್ರತಿಯಿಲ್ಲವೆಂದಿತ್ತು.
ಮತಿಗೆ ಮಹಾಘನವಪ್ಪ ಸುಷುಮ್ನನಾಳದ ಸುಯಿಧಾನವ,
ಪ್ರಮಾಣಿಸಬಾರದು,
ಅಣು ರೇಣು ತೃಣ ಕಾಷ*ದೊಳಗೆ ಭರಿತ ಮನೋಹರ,
ನಿಂದ ನಿರಾಳ ಗುಹೇಶ್ವರಾ.
273.02 374 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 67      C64
ಕಂಗಳಾಲಿಯ ಕರಿಯ ನಾಳದಲ್ಲಿ, ಈರೇಳು ಭುವನಂಗಳಡಗಿದವು!
ನಾಟಕ ನಾಟಕವ ರಚಿಸುತ್ತ, ಆಡಿಸುವ ಸೂತ್ರದ ಪರಿ,
ಗುಹೇಶ್ವರಲಿಂಗ ನಿರಾಳಚೈತನ್ಯ.
44.02 375 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 68      C65
ನೆನಹು ಸತ್ತಿತ್ತು ಭ್ರಾಂತು ಬೆಂದಿತ್ತು.
ಅರಿವು ಮರೆಯಿತ್ತು ಕುರುಹುಗೆಟ್ಟಿತ್ತು.
ಗತಿಯನರಸಲುಂಟೆ? ಮತಿಯನರಸಲುಂಟೆ?
ಅಂಗವೆಲ್ಲ ನಷ್ಟವಾಗಿ ಲಿಂಗಲೀಯವಾಯಿತ್ತು.
ಕಂಗಳಂಗದ ಕಳೆಯ ಬೆಳಗಿನ ಭಂಗ ಹಿಂಗಿತ್ತು ಗುಹೇಶ್ವರಾ.
298.02 376 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 69      C66
ಉಪಾಧಿಕ ಮನವು!
ಉಪಾಧಿಕರಹಿತನ ಮನ ನಿಂದಲ್ಲಿ ನಿವಾತವಾಗಿತ್ತು.
ಆನಂದದ ಭಾವವು!
ಬಿಂದು ತಾನುಳಿದು ನಿಂದಲ್ಲಿ ನಿವಾತವಾಯಿತ್ತು.
ಲಿಂಗೋದಯ ಪ್ರಜ್ವಲಿಸುತ್ತಿದೆ,
ಗುಹೇಶ್ವರಲಿಂಗವು ತಾನೆಯಾಗಿ!
669.02 377 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 70      C67
ತಲೆಯ ಮೇಲೆ ತಲೆಯಿದ್ದಿತ್ತಲ್ಲಾ !
ಆ ತಲೆಯಾತಲೆ ನುಂಗಿತ್ತಲ್ಲಾ !
ಸತ್ತು ಹಾಲ ಸವಿಯ ಬಲ್ಲಡೆ,
ರಥದ ಕೀಲ ಬಲ್ಲಡೆ_ಅದು ಯೋಗ!
ಶಿಶು ಕಂಡ ಕನಸಿನಲುಳ್ಳ ತೃಪ್ತಿ ನಿನ್ನಲ್ಲಿ ಉಂಟೆ ಗುಹೇಶ್ವರಾ?
581.02 378 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 71      C68
ಭಾವಕ್ಕೆ ಇಂಬಿಲ್ಲ ಶಬ್ದ ಮೀಸಲು ನೋಡಾ.
ನುಡಿಗೆ ಎಡೆಯಿಲ್ಲ ಎಡೆಗೆ ಕಡೆಯಿಲ್ಲ,
ಗುಹೇಶ್ವರನೆಂಬ ಶಬ್ದ ವೇದಿಸಲೊಡನೆ
673.02 379 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????

[ಮೊದಲ ಪುಟ]  12345678910ಮುಂದಿನ 10 » [ಕೊನೆ ಪುಟ]


ಸಿಕ್ಕ ಪಲಿತಾಂಶಗಳು 121 ಇದು ಪುಟ 7 ಈ ಪುಟದಲ್ಲಿ ಪಲಿತಾಂಶಗಳು 61 ರಿಂದ 70 ವರೆಗೆ