ಮಹದೇವಯ್ಯನ 'ಶೂನ್ಯಸಂಪಾದನೆ' ವಚನಗಳು
| ವಚನ ಸಂಖ್ಯೆ 72 C69 |
ನಿರ್ವಿಕಲ್ಪಿತವೆಂಬ ನಜದೊಳಗಯ್ಯಾ,
ನಿರಹಂಭಾವದಲ್ಲಿ ನಾನಿದ್ದೆನಯ್ಯಾ (ನೀ ನಿದ್ದೆಯಯ್ಯಾ?)
ನೋಡಿಹೆನೆಂದಡೆ ನೋಡಲಿಲ್ಲ, ಕೇಳಿಹೆನೆಂದಡೆ ಕೇಳಲಿಲ್ಲ.
ಘನನಿರಂಜನದ ಬೆಳಗಿಂಬಾದುದನೇನೆಂಬೆ ಗುಹೇಶ್ವರಾ?
|
692.02 |
380 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 73 C70 |
| ನಿಜವನರಿಯದ ನಿಶ್ಚಿಂತನೆ, ಮರಣವ ಗೆಲಿದ ಮಹಂತನೆ,
ಘನವ ಕಂಡ ಮಹಿಮನೆ, ವರವನೊಳಕೊಂಡ ಪರಿಣಾಮಿಯೆ,
ಬಯಲಲೊದಗಿದ ಭರಿತನೆ,
ಗುಹೇಶ್ವರಲಿಂಗನಿರಾಳವನೊಳಕೊಂಡ ಸಹಜನೆ! |
637.02 |
381 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 74 C71 |
ಜ್ಞಾನಚಕ್ರ:
ಪರಮ ತತ್ವ ಪರಮಜ್ಞಾನ ಪರಮಾರ್ಥ ಪರಾಪರ
ವಾಙ್ಮನಕ್ಕಗೋಚರ ಶಬ್ದಗಂಭೀರ ಉಪಮಾತೀತ, ಉನ್ನತ ಪರಶಿವ,
ಜ್ಞಾನಜ್ಯೋತಿ ಸುಜ್ಞಾನದ ಪ್ರಭೆಯ ಬೆಳಗಿನೊಳಗೆ ಸುಳಿದಾಡುವ
ಪರಮಾನಂದದ ಮಹಾಮಹಿಮಂಗೆ,
ಶಿವಜ್ಞಾನವೆ ಶೃಂಗಾರ, ಮಹಾಬೆಳಗೆ ವಿಭೂತಿ, ಪಂಚಬ್ರಹ್ಮವೆ ದರ್ಶನ
ಗಗನಸ್ಥಾನವೆ ಕಂಥೆ, ಆಕಾಶವೆ ಟೊಪ್ಪರ,
ಅಜಾಂಡ_ಬ್ರಹ್ಮಾಂಡವೆ ಕರ್ಣಕುಂಡಲ,
ಆದಿ ಆಧಾರವೆ ಕಕ್ಷಪಾಳ ಅನಾಹತವೆ ಒಡ್ಯಾಣ, ಅದ್ವೈತವೆ ಯೋಗವಟ್ಟಿಗೆ,
ಅಗಮ್ಯವೆ ಯೋಗವಾವುಗೆ, ಅಚಳಿತವೆ ಖರ್ಪರ, ಅಪ್ರಾಮಣವೆ ಲಾಕುಳ,
ಅವಿಚಾರವೆ ಸುಳುಹು, ಅಕಲ್ಪಿತವೆ ಭಿಕ್ಷೆ, ಕೊಂಡುದೆ ಗಮನ, ನಿಂದುದೆ ನಿವಾಸ,_
ನಿಶ್ಚಿಂತವೆಂಬ ಆಶ್ರಮದಲ್ಲಿ ನಿರಾಕುಳವೆಂಬ ಸಿಂಹಾಸನವನಿಕ್ಕಿ;
ಗಗನಗಂಭೀರದ ಬಾವಿಯೊಳಗೆ ಅಗೋಚರದ ಅಗ್ಘಣಿಯ ತಂದು
ಮಹಾಘನಪ್ರಾಣಲಿಂಗಕ್ಕೆ ಮಂಗಳದ ಬೆಳಗಿನಲ್ಲಿ ಮಜ್ಜನಕ್ಕೆರೆದು;
ಬಿಂದ್ವಾಕಾಶವೆ ಗಂಧ, ಮಹದಾಕಾಶವೆ ಅಕ್ಷತೆ, ಪರಾಪರವೆ ಪತ್ರೆಪುಷ್ಪ,
ನಿರ್ಮಳವೆ ಲಿಂಗಾರ್ಚನೆ, ಮಹಾಪ್ರಕಾಶವೆ ಪೂಜೆ,
ನಿತ್ಯನಿರಂಜನವೆ ಧೂಪದೀಪಾರತಿ,
ಸಕಲ ಭುವನಾದಿಭುವನಂಗಳೆ ಸಯದಾನ, ಆಚಾರವೆ ಅರ್ಪಿತ, ಮಹತ್ವವೆ ಸಿತಾಳ,
ಅಖಂಡಿತವೆ ಅಡಕೆ, ಏಕೋಭಾವವೆ ಎಲೆ, ಶುದ್ಧಶಿವಾಚಾರವೆ ಸುಣ್ಣ_
ವಿವೇಕ ವಿಚಾರದಿಂದ ವೀಳೆಯವನವಧರಿಸೂದು.
ಮಹಾಲಿಂಗದ ಪರಿಣಾಮವೆ ಪ್ರಸಾದ, ಸಮ್ಯಕ್ ಜ್ಞಾನವೆ ಸಂತೋಷ.
ಸಹಜ ನಿರಾಭಾರಿಗಳ ಮೇಳದಿಂದ, ನಿಸ್ಸೀಮದ ನಿಭ್ರಾಂತಿನ ಸುಸಂಗದಲ್ಲಿ_
ನಿರಾಶಾಪದವೆ ಅನುಕೂಲ, ನಿಶ್ಶಬ್ದವೆ ಅನುಭಾವ,
ಅನುಪಮದ ನಿಶ್ಶೂನ್ಯವೆ ವಿಶ್ರಾಮ, ನಿರಾಕಾರವೆ ಗಮನ.
ನಿರಂತರ ಪಾತಾಳ ಊಧ್ರ್ವದ ಪವನ;_ತ್ರಿಭುವನಗಿರಿಯೆಂಬ ಪರ್ವತವನೇರಿ,
ಕಾಯವೆಂಬ ಕದಳಿಯ ಹೊಕ್ಕು ಸುಳಿದಾಡುವ
ಪರಮಾನಂದದ ಮಹಾಮಹಿಮಂಗೆ;
ಇಹಲೋಕವೇನು? ಪರಲೋಕವೇನು?
ಅಲ್ಲಿಂದತ್ತ ಆಗಮ್ಯ ನಿರಾಳ ಪರಮಜ್ಞಾನದ ಸಿದ್ಧಿ ಮಹಾಲಿಂಗದ ಬೆಳಗು,
ಗುಹೇಶ್ವರಾ, ನಿಮ್ಮ ನಿಜವನರಿದ ಮಹಾಮಹಿಮ ಶರಣಂಗೆ,
ನಮೋ ನಮೋ ಎಂಬೆನು.
|
374.02 |
382 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 75 C72 |
ಕಾಲಿಲ್ಲದ ಗಮನ, ಕೈಯಿಲ್ಲದ ಸೋಂಕು, ಬಾಯಿಲ್ಲದ ರುಚಿ,
ಭಾವವೆ ಕರ್ಪರವಾಗಿ «ಪರಮ ದೇಹಿ» ಎಂದು ಬೇಡುವ
ಪರಮನ ತೋರಯ್ಯಾ ಗುಹೇಶ್ವರಾ. |
449.02 |
383 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 76 C73 |
ಕಣ್ಣೆ ಕಟ್ಟಿಗೆಯಾಗಿ, ಕೈಯೆ ಕರ್ಪರವಾಗಿ ,
ಕಿವಿಯೆ ಸಕಲಪುರಾತನರ ಕಾರುಣ್ಯವೆನುತ,
ಮನದ ಭಿಕ್ಷವನುಂಡು, ತನು ಪರಿಣಾಮವನೆಯ್ದಿಹ
ಘನಮಹಿಮರ ತೋರಯ್ಯಾ ಗುಹೇಶ್ವರಾ |
450.02 |
384 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 77 C74 |
ಕಂಡುದೆಲ್ಲ ಪಾವನ ಕೇಳಿತ್ತೆಲ್ಲ ಪರಮಬೋಧೆ,
ಮುಟ್ಟಿತ್ತೆಲ್ಲ ಪರುಷದ ಸೋಂಕು
ಒಡನೆ ನುಡಿದವರೆಲ್ಲ ಸದ್ಯೋನ್ಮುಕ್ತರು.
ಸುಳಿದ ಸುಳುಹೆಲ್ಲ ಜಗತ್ಪಾವನ, ಮೆಟ್ಟಿದ ಧರೆಯೆಲ್ಲ ಅವಿಮುಕ್ತಕ್ಷೇತ್ರ,
ಸೋಂಕಿದ ಜಲವೆಲ್ಲ ಪುಣ್ಯತೀರ್ಥಂಗಳು.
ಶರಣೆಂದು ಭಕ್ತಿಯ ಮಾಡಿದವರೆಲ್ಲರು ಸಾಯುಜ್ಯರು.
ಗುಹೇಶ್ವರಾ ನಿಮ್ಮ ಸುಳುಹಿನ ಸೊಗಸನುಪಮಿಸಬಾರದು. |
1037.02 |
385 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 78 C75 |
ಅರಿವನಣಲೊಳಗಿಕ್ಕಿ ಅಗಿವುತ್ತಿದೆ ಮರ್ತ್ಯಲೋಕವೆಲ್ಲವು.
ಅರಿವು ಉಳಿಯಲರಿಯದೆ ಕೆಟ್ಟಿತ್ತು ಲೋಕವೆಲ್ಲವು.
ನಾನೆಂತು ಬದುಕುವೆನಣ್ಣಾ ?
ಕತ್ತಲೆ ಬೆಳಗ ಕಾಂಬ ಸಂದೇಹಿ ನಾನೊಬ್ಬಳು.
ಎನ್ನ ಕಣ್ಣ ಕಟ್ಟಿ ಕನ್ನಡಿಯ ತೋರಿತ್ತೊ ಅಜಗಣ್ಣಾ ನಿನ್ನ ಯೋಗ! |
1099.05 |
386 |
ಮುಕ್ತಾಯಕ್ಕ | ಅಜಗಣ್ಣಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 79 C76 |
ಸ್ಫಟಿಕಪ್ರಜ್ವಲಜ್ಯೋತಿ ಘಟದೊಳಗೆ ತೋರುತ್ತಿರೆ,
ದಿಟಪುಟವನತಿಗಳೆದು ಸಟೆಯ ಬಳಸುವರೆ?
ಅಂತರಂಗದ ಶುದ್ಭಿಯ ಬಹಿರಂಗಕ್ಕೆ ತಂದು
ಸಂತೈಸಲರಿಯದೆ ಮರುಳಾದಿರಣ್ಣಾ ?
ಜಂತ್ರದ ಕೀಲಕೂಟದ ಸಂಚದ ಭೇದವು ತಪ್ಪಿ,
ಮಂತ್ರಭಿನ್ನವಾಗಿ ನುಡಿವರೆ ಅಜಗಣ್ಣಾ ? |
1132.05 |
387 |
ಮುಕ್ತಾಯಕ್ಕ | ಅಜಗಣ್ಣಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 80 C77 |
ಅಂಧಕನ ಕೈಯ ಅಂಧಕ ಹಿಡಿದಂತಿರಬೇಕು.
ಮೂಗನ ಕೈಯಲ್ಲಿ ಕಾವ್ಯವ ಕೇಳಿದಂತಿರಬೇಕು.
ದರ್ಪಣದೊಳಗಣ ಪ್ರತಿಬಿಂಬದಂತೆ
ಹಿಡಿವರಿಗಳವಲ್ಲದಿರಬೇಕು ಅಣ್ಣಾ.
ಕೂರ್ಮನ ಶಿಶುವಿನ ಸ್ನೇಹದಂತೆ ಇರಲೊಲ್ಲದೆ
ಆರೂಢಗೆಟ್ಟೆಯೊ ಅಜಗಣ್ಣಾ. |
1097.05 |
388 |
ಮುಕ್ತಾಯಕ್ಕ | ಅಜಗಣ್ಣಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 81 C78 |
ರವಿಯೊಳಡಗಿದ ಪ್ರತಿಬಿಂಬದಂತೆ
ಹಿಡಿವರಿಗಳವಲ್ಲದಿರಬೇಕು ಅಣ್ಣಾ.
ನಿನ್ನೊಳಡಗಿದ ಭೇದವ ಭಿನ್ನವಮಾಡುವರೆ ಅಣ್ಣಾ?
ನಿನ್ನ ನುಡಿಯೆಲ್ಲ ಪ್ರತಿಬಿಂಬಗಳಾದವೆ ಅಣ್ಣಾ.
ಕೊಡನೊಳಗಣ ಜ್ಯೋತಿಯ ಅಡಗಿಸಲರಿಯದೆ
ಮಿಗೆವರಿದಂತಾದೆಯೊ ಅಜಗಣ್ಣಾ!
|
1125.05 |
389 |
ಮುಕ್ತಾಯಕ್ಕ | ಅಜಗಣ್ಣಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
[ಮೊದಲ ಪುಟ] 1 2 3 4 5 6 7 8 9 10 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 121 ಇದು ಪುಟ 8 ಈ ಪುಟದಲ್ಲಿ ಪಲಿತಾಂಶಗಳು 71 ರಿಂದ 80 ವರೆಗೆ |
|
|